Thursday, March 8, 2012

Fwd: [lingayt @ facebook] "ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ



---------- Forwarded message ----------
From: Sandya Cu <notification+kr4marbae4mn@facebookmail.com>
Date: 2012/3/9
Subject: [lingayt @ facebook] "ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
To: "lingayt @ facebook" <206207066095610@groups.facebook.com>


"ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ...
Sandya Cu 12:34pm Mar 9
"ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ
ಸತ್ಯಶುದ್ಧವಿಲ್ಲದುದು ಕಾಯಕವಲ್ಲ
ಆಸೆಯೆಂಬುದು ಭವದ ಬೀಜ
ನಿರಾಸೆಯೆಂಬುದು ನಿತ್ಯಮುಕ್ತಿ
ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ."

ಆ ಮೂಲಕ ಸಾವನ್ನು ಗೆಲ್ಲುತ್ತಾನೆ.
ದೇವರ ಹಂಗಿಗೆ ಒಳಗಾಗದೆ ದೇವರನ್ನು ಆರಾಧಿಸುವ ಕ್ರಮವನ್ನು ನಮಗೆ ಕಲಿಸಿಕೊಟ್ಟಿದ್ದಾನೆ. ಜನಸಾಮಾನ್ಯರು ಶರಣಸಂಕುಲ ಸೇರಿ ಹೀಗೆ ಆತ್ಮಸ್ಥೈರ್ಯ ಪಡೆದು ಅಸಾಮಾನ್ಯರಾಗುವಲ್ಲಿ ಬಸವಣ್ಣನವರ ಶ್ರಮ ಅಡಗಿದೆ. ಅಂತೆಯೆ ಶರಣರಿಗೆ ಬದುಕೆಂಬುದು ದುಃಖದ ಆಗರವೆಂದು ಅನಿಸುವುದಿಲ್ಲ. ಶರಣರು ಸವಾಲನ್ನು ಎದುರಿಸುತ್ತ ಆನಂದವನ್ನು ಅನುಭವಿಸುವವರು.ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ.
ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ಮೊದಲಬಾರಿಗೆ ಯಾವರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭಾವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ

View Post on Facebook · Edit Email Settings · Reply to this email to add a comment.

No comments: